Popular Posts

ಅಧಿವೇಶನದಲ್ಲಿ ಬರ ಘೋಷಣೆಗೆ ಕ್ರಮ:  ರೈತರ ನೆರವಿಗೆ ಸರ್ಕಾರ ಬದ್ಧ: 2.5 ಲಕ್ಷ ರೈತರು ಬೆಳೆ ವಿಮೆಯಡಿ ನೋಂದಣಿ ರೈತರಿಗೆ ಮಧ್ಯಂತರ ನಷ್ಟ ಭರಿಸಲು ಕ್ರಮ -:ಸಚಿವ ಈಶ್ವರ ಖಂಡ್ರೆ


ಬೀದರ್ ಆಗಸ್ಟ್ 11 (ಕಕ ವಾರ್ತೆ) ಜೂನ್ ಮತ್ತು ಜುಲೈ ತಿಂಗಳಲ್ಲಿ ಜಿಲ್ಲೆಯಲ್ಲಿ ಮಳೆ ಅಭಾವದಿಂದ ಸಂಪೂರ್ಣ ಬೆಳೆಗಳು ಹಾಳಾಗಿದ್ದು, ಬರ ಜಿಲ್ಲೆಯನ್ನಾಗಿ ಘೋಷಿಸಲು ಅಧಿವೇಶನದಲ್ಲಿ ಚರ್ಚಿಸಲಾಗುವುದೆಂದು ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಬೀದರ್ ಜಿಲ್ಲಾ ಪ್ರಕೃತಿ ವಿಕೋಪ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದರು.
ಅವರು ಇಂದು ಬೀದರ್ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಬರ, ಕುಡಿಯುವ ನೀರು ಹಾಗೂ ಇತರೆ ವಿಷಯಗಳ ಬಗ್ಗೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಉಂಟಾಗಿರುವ ಮಳೆ ಅಭಾವ ಹಾಗೂ ತೇವಾಂಶ ಕೊರತೆಯಿಂದಾಗಿ ಬೆಳೆ ನಷ್ಟ ಎದುರಿಸುತ್ತಿರುವ ರೈತರ ನೆರವಿಗೆ ಸರ್ಕಾರ ತಕ್ಷಣವೇ ಧಾವಿಸಲಿದೆ ಸಚಿವರು ಅಭಯ ನೀಡಿದರು.
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಒಟ್ಟು 4.12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡುವ ಗುರಿ ಹೊಂದಲಾಗಿತ್ತು. ಆದರೆ ಮಳೆಯ ಸುರಿಯುವಿಕೆಯಲ್ಲಿ ಆದ ಏರುಪೇರು ಹಾಗೂ ಸುದೀರ್ಘ ಒಣ ಹವೆಯಿಂದಾಗಿ ಬಿತ್ತನೆಯಾಗಿರುವ ಹೆಸರು, ಉದ್ದು ಸೇರಿದಂತೆ ಪ್ರಮುಖ ಬೆಳೆಗಳು ಮಳೆ ಕೊರತೆಯಿಂದ ಒಣಗಿ ಹಾಳಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದ್ದು, ರೈತರ ಹಿತಸಾಕ್ತಿ ಕಪ್ಪಾಡಲು ಸರ್ಕಾರ ಭದ್ಧವಿದೆ ಎಂದರು. ಈ ಹಿನ್ನೆಲೆಯಲ್ಲಿ ಬೆಳೆ ವಿಮೆ ಯೋಜನೆಯಡಿಯ ‘ಮಿಡ್-ಸೀಸನ್ ಅಡ್ವರ್ಸಿಟಿ’ (ಮಧ್ಯಂತರ ಬೆಳೆ ಹಾನಿ) ನಿಯಮಗಳನ್ನು ಸಕ್ರಿಯಗೊಳಿಸಲು ಕೃಷಿ ಇಲಾಖೆಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೃಷಿ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಆಯುಕ್ತರೊಂದಿಗೆ ಈಗಾಗಲೇ ಮಾತುಕತೆ ನಡೆಸಲಾಗಿದ್ದು, ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೂ ಈ ವಿಚಾರವನ್ನು ತರಲಾಗಿದೆ. ಸರ್ಕಾರ ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಮಾನದಂಡಗಳ ಪ್ರಕಾರ ರೈತರಿಗೆ ಪರಿಹಾರ ತಲುಪಿಸಲು ಬದ್ಧವಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ರೈತರ ಬೆಳೆ ವಿಮೆ ಮತ್ತು ಬೆಳೆ ನಷ್ಟ ಪರಿಹಾರದ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಪ್ರಸಕ್ತ ಸಾಲಿನಲ್ಲಿ ಸಾಲ ಪಡೆದ ಹಾಗೂ ಪಡೆಯದ ಸುಮಾರು 2.5 ಲಕ್ಷಕ್ಕೂ ಹೆಚ್ಚು ರೈತರು ವಿಮೆ ನೋಂದಣಿ ಮಾಡಿಸಿಕೊಂಡಿದ್ದು, ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ಜಂಟಿಯಾಗಿ ಸಮೀಕ್ಷೆ ನಡೆಸಿ ಮಧ್ಯಂತರ ಬೆಳೆ ನಷ್ಟದ ಸರಿಯಾದ ವರದಿ ತಯಾರಿಸಬೇಕು ಎಂದು ಸೂಚಿಸಿದರು. ಜಿಲ್ಲೆಗೆ ಬೆಳೆ ವಿಮೆಯಡಿ ಈಗಾಗಲೇ 236 ಕೋಟಿ ರೂಪಾಯಿ ಪರಿಹಾರ ಬಿಡುಗಡೆಯಾಗಿದೆ.
ಜಿಲ್ಲೆಯಲ್ಲಿ ಕುಡಿಯುವ ನೀರು, ಬರ ನಿರ್ವಹಣೆ ಹಾಗೂ ಕೃಷಿ ಸಮಸ್ಯೆಗಳ ಕುರಿತು ನಿರಂತರ ನಿಗಾ ವಹಿಸಲಾಗುತ್ತಿದ್ದು, ಜಿಲ್ಲಾಧಿಕಾರಿಗಳು ಸೇರಿದಂತೆ ಎಲ್ಲಾ ಇಲಾಖೆ ಅಧಿಕಾರಿಗಳೊಂದಿಗೆ ಸತತವಾಗಿ 2 ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸಿ ಪರಿಸ್ಥಿತಿಯನ್ನು ಪರಾಮರ್ಶಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.
ಜಿಲ್ಲೆಯಲ್ಲಿ ಗ್ರಾಮೀಣ ಕುಡಿಯುವ ನೀರು ಪೂರೈಕೆ ಮತ್ತು ಜಲ ಜೀವನ್ ಮಿಷನ್ (ಎಎಒ) ಯೋಜನೆಯ ಕಾಮಗಾರಿಗಳು ನಿರೀಕ್ಷಿತ ಮಟ್ಟದಲ್ಲಿ ಪೂರ್ಣಗೊಳ್ಳದಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ಅನೇಕ ಕಡೆ ಪೈಪ್‌ಲೈನ್ ಅಳವಡಿಕೆ ಮತ್ತು ಸಂಪರ್ಕ ನೀಡುವ ಕೆಲಸ ಅರ್ಧಕ್ಕೆ ನಿಂತಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಕಾಮಗಾರಿಯಲ್ಲಿ ವಿಳಂಬ ಧೋರಣೆ ತೋರುತ್ತಿರುವ ಮತ್ತು ಕಳಪೆ ಕೆಲಸ ಮಾಡುತ್ತಿರುವ ಗುತ್ತಿಗೆದಾರರಿಗೆ ಹಾಗೂ ಸಂಬAಧಪಟ್ಟ ಅಧಿಕಾರಿಗಳಿಗೆ ತಕ್ಷಣವೇ ನೋಟಿಸ್ ಜಾರಿಗೊಳಿಸಿ, ಮುಂದಿನ ಸಭೆಯ ವೇಳೆಗೆ ಸಂಪೂರ್ಣ ವರದಿ ಸಲ್ಲಿಸಬೇಕೆಂದು ಕಟ್ಟುನಿಟ್ಟಿನ ಆದೇಶ ನೀಡಿದರು.
ಬಿವಿಜಿ ರಾಮ್ ಜಿ ಯೋಜನೆ ಅಡಿಯಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಉದ್ಯೋಗ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಆಗಸ್ಟ್ 11ರಂದು ಜಿಲ್ಲೆಯಲ್ಲಿ 20 ಸಾವಿರ ಜನರು ಉದ್ಯೋಗ ಕೈಗೊಂಡಿದ್ದಾರೆ ಇದುವರೆಗೆ ಒಟ್ಟು 3.29 ಲಕ್ಷ ಮಾನವ ದಿನಗಳನ್ನು ಉತ್ಪಾದಿಸಲಾಗಿದೆ ಎಂದರು. ಪ್ರತಿದಿನ ಬೆಳಿಗ್ಗೆ ತಾಲೂಕು ಪಂಚಾಯತ್ ಅಧಿಕಾರಿಗಳು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಬೇಕು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಎಲ್ಲಾ ಸಂಬAಧಿಸಿದ ಇಲಾಖೆಗಳು ಕಾಮಗಾರಿ ಕೈಗೊಳ್ಳಬೇಕು ಎಂದು ಸೂಚಿಸಿದರು.
ಕೆಲ ಗ್ರಾಮ ಪಂಚಾಯತಿಗಳಲ್ಲಿರುವ ನೀರು ಶುದ್ಧೀಕರಣ ಘಟಕಗಳು ಬಹುತೇಕ ಹಾಳಾಗಿದ್ದು, ಈ ಆರೋ ಪ್ಲಾಂಟ್ ಗಳ ನಿರ್ವಹಣೆಗೆ 3 ವರ್ಷಗಳ ಕಾಲ ಗುತ್ತಿಗೆ ನೀಡುವ ಚಿಂತನೆ ಸರಕಾರ ನಡೆಸುತ್ತಿದ್ದು, ಎಲ್ಲ ನಿರ್ವಹಣೆಯನ್ನು ಗುತ್ತಿಗೆದಾರರೇ ಕೈಗೊಳ್ಳಬೇಕು ಎಂದು ಸಚಿವರು ತಿಳಿಸಿದರು.
ಈ ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ್ ಸಿಇಒ ಗಿರೀಶ್ ಬದೋಲೆ, ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.


Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading