Popular Posts

ಆಮ್ ಆದ್ಮಿ ಪಕ್ಷ ಬೀದರ್ ಜಿಲ್ಲೆಯಲ್ಲಿ ಹೊಸ ಪದಾಧಿಕಾರಿಗಳ ಆಯ್ಕೆ

ಬೀದರ್, ಫೆಬ್ರವರಿ 13:ಆಮ್ ಆದ್ಮಿ ಪಕ್ಷ ಕರ್ನಾಟಕ ಘಟಕದ ವತಿಯಿಂದ ಬೀದರ್ ಜಿಲ್ಲೆಯಲ್ಲಿ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಜಿಲ್ಲಾ ಯುವ ಘಟಕ ಅಧ್ಯಕ್ಷರಾಗಿ ಶ್ರೀ ಜಗನ್ನಾಥ ಹೂಗಾರ ಅವರನ್ನು ಹಾಗೂ ಜಿಲ್ಲಾ ಉಪಾಧ್ಯಕ್ಷರಾಗಿ ರಾಜಕುಮಾರ ಪಾಟೀಲ್ ಬಾವಗಿ ಅವರನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಪಕ್ಷದ ಬೆಳವಣಿಗೆ ಹಾಗೂ ಸಂಘಟನಾತ್ಮಕ ಬಲವರ್ಧನೆಗಾಗಿ ಇವರನ್ನು ಆಯ್ಕೆ ಮಾಡಲಾಗಿದೆ. ಹೊಸದಾಗಿ ಆಯ್ಕೆಯಾದ ಪದಾಧಿಕಾರಿಗಳು ತಕ್ಷಣದಿಂದಲೇ ತಮ್ಮ ಕಾರ್ಯಭಾರವನ್ನು ಸ್ವೀಕರಿಸಿ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸೇವಾಭಾವದಿಂದ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಲಾಗಿದೆ.

ಈ ಕುರಿತು ಪ್ರಕಟಣೆ ನೀಡಿರುವ ಪ್ರಧಾನ ಕಾರ್ಯದರ್ಶಿ ಎಂ.ಡಿ. ಜಾವಿದ ಹಾಗೂ ಜಿಲ್ಲಾ ಘಟಕ ಅಧ್ಯಕ್ಷ ಸಿದ್ದಪ್ಪ ಫೂಲಾರಿ ಅವರು, ಪಕ್ಷದ ಉನ್ನತ ಮಟ್ಟದ ಕಾರ್ಯಚಟುವಟಿಕೆಗಳಿಗೆ ಹೊಸ ಪದಾಧಿಕಾರಿಗಳಿಂದ ಹೆಚ್ಚಿನ ಸಹಕಾರ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ


Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading