Popular Posts

ಈಶ್ವರ ಬಿ. ಖಂಡ್ರೆ ಅವರಿಗೆ ಲಕ್ಷ್ಮಣ ನಿರ್ಣಾಕರ್ ಅಭಿನಂದನೆ

ಬೀದರ್: ಬೀದರ್ ತಾಲೂಕಿನ ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಯ ಪಾತರಪಳ್ಳಿ ಗ್ರಾಮದಲ್ಲಿ ನಿರ್ಮಿಸಲಾದ ಭವ್ಯ ಮುಖ್ಯದ್ವಾರ ಉದ್ಘಾಟನಾ ಸಮಾರಂಭಕ್ಕೆ ಸನ್ಮಾನ್ಯ ಶ್ರೀ ಈಶ್ವರ ಬಿ. ಖಂಡ್ರೆ ಜಿ. ಅವರು ಆಗಮಿಸಿದ ಸಂದರ್ಭದಲ್ಲಿ, ಸ್ಥಳೀಯ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯತ್ ಸಿಂದೋಲ್ ಸದಸ್ಯರಾದ ಶ್ರೀ ಲಕ್ಷ್ಮಣ ನಿರ್ಣಾಕರ್ ಅವರು ಸನ್ಮಾನಿಸಿ ಅಭಿನಂದಿಸಿದರು.

ಪಾತರಪಳ್ಳಿ ಗ್ರಾಮದ ಪ್ರವೇಶದ್ವಾರವನ್ನು ಸ್ಥಳೀಯರಾದ ಶ್ರೀ ಲಕ್ಷ್ಮಣ ನಿರ್ಣಾಕರ್ ಅವರು ತಮ್ಮ ಸ್ವಂತ ವೆಚ್ಚದಲ್ಲಿ ನಿರ್ಮಿಸಿದ್ದು, ಅದರ ಭವ್ಯತೆಯನ್ನು ಗಮನಿಸಿದ ಶ್ರೀ ಖಂಡ್ರೆ ಅವರು ಸಂತೋಷ ವ್ಯಕ್ತಪಡಿಸಿದರು. ಗ್ರಾಮಾಭಿವೃದ್ಧಿಯತ್ತ ಜನಪ್ರತಿನಿಧಿಗಳೊಂದಿಗೆ ಸಮಾಜ ಸೇವಕರೂ ಕೈಜೋಡಿಸುವುದು ಶ್ಲಾಘನೀಯ ಕಾರ್ಯ ಎಂದು ಅವರು ಅಭಿಪ್ರಾಯಪಟ್ಟರು.

ಗ್ರಾಮದ ಸರ್ವಾಂಗೀಣ ಅಭಿವೃದ್ಧಿಯನ್ನು ಗಮನದಲ್ಲಿಟ್ಟು ಶಾಸಕರ ಅನುದಾನದಿಂದ ಸುಮಾರು 50 ಲಕ್ಷ ರೂಪಾಯಿ ಮಂಜೂರು ಮಾಡಿರುವುದಾಗಿ ಅವರು ತಿಳಿಸಿದರು. ಈ ಅನುದಾನದಿಂದ ಪಾತರಪಳ್ಳಿ ಗ್ರಾಮದ ಮೂಲಸೌಕರ್ಯ ಅಭಿವೃದ್ಧಿಗೆ ಉತ್ತೇಜನ ದೊರೆಯಲಿದೆ ಎಂದು ಗ್ರಾಮಸ್ಥರು ಆಶಾಭಾವ ವ್ಯಕ್ತಪಡಿಸಿದ್ದಾರೆ.


Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading