Popular Posts

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಸದ ಸಾಗರ ಖಂಡ್ರೆ ಅಧಿಕಾರಿಗಳಿಗೆ ಸೂಚನೆ

ಬೀದರ, ಫೆಬ್ರವರಿ.16 :- ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಕೇಂದ್ರ ಪುರಸ್ಕøತ ಯೋಜನೆಗಳ ಪರಿಣಾಮಕಾರಿ ಅನುμÁ್ಠನ ಹಾಗೂ ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವಂತೆ ಹಾಗೂ ವಿಳಂಬ ಧೋರಣೆ ಅನುಸರಿಸುವ ಅಧಿಕಾರಿ ಮತ್ತು ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಂಸದರಾದ ಸಾಗರ್ ಖಂಡ್ರೆ ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಅವರು ಸೋಮವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೇಂದ್ರ ಪುರಷ್ಕøತ ಯೋಜನೆಗಳ ಅನುಷ್ಠಾನಾ ಪ್ರಗತಿ ಪಶೀಲನೆ ಜಿಲ್ಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ (ಪಿಎಂಎಫ್‍ಬಿಯಾ) ಸಮರ್ಪಕವಾಗಿ ಅನುμÁ್ಠನವಾಗುತ್ತಿಲ್ಲ ಎಂಬ ದೂರುಗಳು ವ್ಯಾಪಕವಾಗಿವೆ. ರೈತರಿಗೆ ವಿಮೆ ಹಣ ತಲುಪುವಲ್ಲಿ ಆಗುತ್ತಿರುವ ವಿಳಂಬಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಸಂಸದರು, ಈ ಕುರಿತು ತಕ್ಷಣ ಸಮಗ್ರ ವರದಿ ಸಲ್ಲಿಸಲು ಕೃಷಿ ಅಧಿಕಾರಿಗಳಿಗೆ ಸೂಚಿಸಿದರು.
ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆ, ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಈಗಿನಿಂದಲೇ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು. ಜಲ ಜೀವನ್ ಮಿಷನ್ ಯೋಜನೆಯಡಿ ಕಳಪೆ ಕಾಮಗಾರಿ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿರುವ ಗುತ್ತಿಗೆದಾರರನ್ನು ತಕ್ಷಣವೇ ಕಪ್ಪು ಪಟ್ಟಿಗೆ ಸೇರಿಸಲು ಕಟ್ಟುನಿಟ್ಟಿನ ಆದೇಶ ನೀಡಿದರು.
ಇತ್ತೀಚೆಗೆ ಔರಾದ್ ಶಾಲೆಯಲ್ಲಿ ಬಿಸಿ ಊಟ ಸೇವನೆಯಿಂದ ಮಕ್ಕಳು ಅಸ್ವಸ್ಥಗೊಂಡ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಸಂಸದರು, ಕಾರಣಕರ್ತರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಸೂಚಿಸಿದರು. ಜಿಲ್ಲೆಯಲ್ಲಿ ಗರ್ಭಿಣಿಯರಿಗೆ ಸಕಾಲದಲ್ಲಿ ಸಮರ್ಪಕ ಚಿಕಿತ್ಸೆ ಲಭ್ಯವಾಗಬೇಕು. ಜೊತೆಗೆ ಹೆಚ್ಚುತ್ತಿರುವ ಮಾದಕವಸ್ತು ವ್ಯಸನ ತಡೆಗಟ್ಟಲು ಮಾದಕವಸ್ತು ಪುನರ್ವಸತಿ ಕೇಂದ್ರ (Drug Rehabilitation Centre)  ಸ್ಥಾಪನೆಗೆ ತಕ್ಷಣ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.
ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಈ ವರ್ಷದ SSಐಅ ಮತ್ತು PUಅ ಫಲಿತಾಂಶಗಳಲ್ಲಿ ಜಿಲ್ಲೆ ಗಮನಾರ್ಹ ಸಾಧನೆ ಮಾಡಬೇಕು. ಮಧ್ಯಾಹ್ನದ ಬಿಸಿ ಊಟದ ಗುಣಮಟ್ಟವನ್ನು ಅಧಿಕಾರಿಗಳು ಖುದ್ದಾಗಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸಂಸದರು ಸೂಚಿಸಿದರು.
ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಅಪಘಾತ ವಲಯಗಳನ್ನು (Black Spots) ಗುರುತಿಸಿ ತಕ್ಷಣ ದುರಸ್ತಿ ಪಡಿಸಬೇಕು. ರೈಲ್ವೆ ನಿಲ್ದಾಣಗಳಲ್ಲಿ ಸ್ವಚ್ಛತೆ ಕಾಪಾಡಿ, ನಡೆಯುತ್ತಿರುವ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ರೈಲ್ವೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
“ಸರ್ಕಾರದ ಯೋಜನೆಗಳು ಕೇವಲ ದಾಖಲೆಗಳಲ್ಲಿ ಸೀಮಿತವಾಗಬಾರದು. ಅವುಗಳ ಲಾಭ ಜನಸಾಮಾನ್ಯರಿಗೆ ತಲುಪಬೇಕು. ಕರ್ತವ್ಯ ಲೋಪ ಎಸಗುವ ಯಾವುದೇ ಅಧಿಕಾರಿಯನ್ನು ಸಹಿಸುವುದಿಲ್ಲ” ಎಂದು ಸಂಸದ ಸಾಗರ್ ಖಂಡ್ರೆ ಸಭೆಯಲ್ಲಿ ಎಚ್ಚರಿಸಿದರು.
ಈ ಸಭೆಯಲ್ಲಿ ಜಿಲ್ಲಾಧಿಕಾರಿಗಲಾದ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಬೀದರ ಮಹಾನಗರ ಪಾಲಿಕೆ ಆಯುಕ್ತರಾದ ಮುಕುಲ್ ಜೈನ್, ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶೀಷ್ ರೆಡ್ಡಿ, ಜಿಲ್ಲಾ ಹಾಗೂ ತಾಲ್ಲೂಕಾ ಮಟ್ಟದ ಅಧಿಕಾರಿಗಳು ಸೇರಿದಂತೆ ಆಳಂದ, ಚಿಂಚೋಳಿ ತಾಲ್ಲೂಕಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
*****


Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading