1
1

ಬೀದರ್: ರಾಜ್ಯದಲ್ಲಿ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ರಾಜ್ಯ ಸರ್ಕಾರ ನಿಷೇಧ ಹೇರಿರುವುದಕ್ಕೆ ನಮ್ಮ ಕರ್ನಾಟಕ ಸೇನೆ ಮೆಚ್ಚುಗೆ ವ್ಯಕ್ತಪಡಿಸಿದೆ.
ರಾಜ್ಯ ಸರ್ಕಾರದ ಕ್ರಮ ಸ್ವಾಗತಾರ್ಹ. ಆರೋಗ್ಯಪೂರ್ಣ ರಾಜ್ಯ ನಿರ್ಮಾಣಕ್ಕೆ ಇದು ಸಹಕಾರಿಯಾಗಲಿದೆ ಎಂದು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ಪಾಟೀಲ ಪ್ರತಿಕ್ರಿಯಿಸಿದ್ದಾರೆ.
ತಂಬಾಕು ಸೇವನೆಯಿಂದ ರಾಜ್ಯದಲ್ಲಿ ಪ್ರತಿ ವರ್ಷ ಅನೇಕರು ಕ್ಯಾನ್ಸರ್ ಸೇರಿದಂತೆ ವಿವಿಧ ರೋಗಗಳಿಗೆ ಬಲಿಯಾಗುತ್ತಿದ್ದಾರೆ ಎಂದು ಹೇಳಿದ್ದಾರೆ.
ಸರ್ಕಾರದ ಆದೇಶ ಕಟ್ಟು ನಿಟ್ಟಾಗಿ ಜಾರಿಗೆ ಬರಬೇಕು. ನಿಷೇಧಿತ ತಂಬಾಕು ಉತ್ಪನ್ನ ಮಾರಾಟ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
Subscribe to get the latest posts sent to your email.