1
1

ಬೀದರ್: ನಗರದ ವೈಬ್ ಹೋಟೆಲ್ನಲ್ಲಿ ಫೆ. 17 ರಂದು ಸಂಜೆ 5.30ಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರಿಗೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ ಬಿರಾದಾರ ಚಿದ್ರಿ ತಿಳಿಸಿದ್ದಾರೆ.
ಷಡಾಕ್ಷರಿ ಅವರು ಅಂದು ಬೆಳಿಗ್ಗೆ 11ಕ್ಕೆ ಹುಲಸೂರು- ಭಾಲ್ಕಿ ರಸ್ತೆಯಲ್ಲಿ ಸಂಘದ ನೂತನ ಕಚೇರಿ ಉದ್ಘಾಟಿಸಲಿದ್ದಾರೆ ಎಂದು ಹೇಳಿದ್ದಾರೆ.
ಷಡಾಕ್ಷರಿ ಅವರು ನೌಕರರ ಸಂಘವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ. ನೌಕರರ ಹಿತ ರಕ್ಷಣೆಗೆ ನಿರಂತರ ಶ್ರಮಿಸುತ್ತಿದ್ದಾರೆ. ರಾಜ್ಯ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಬೀದರ್ಗೆ ಭೇಟಿ ನೀಡಲಿದ್ದಾರೆ. ಹೀಗಾಗಿ ಅವರಿಗೆ ಅಭಿನಂದನೆ ಸಮಾರಂಭ ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಂಘದ ಜಿಲ್ಲಾ ಪದಾಧಿಕಾರಿಗಳು, ತಾಲ್ಲೂಕು ಅಧ್ಯಕ್ಷರು, ಪದಾಧಿಕಾರಿಗಳು, ನಿರ್ದೇಶಕರು, ಜಿಲ್ಲೆಯ ಎಲ್ಲ ವೃಂದ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನೌಕರರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.