1
1

ಬೆಂಗಳೂರು:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ವತಿಯಿಂದ ಬೀದರದಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಅಂಗವಾಗಿ ಹೊರತಂದಿರುವ ಪತ್ರಕರ್ತ ನೆನಪಿನ ಸಂಚಿಕೆಯನ್ನು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಡುಗಡೆ ಮಾಡಿ, ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ
ಪತ್ರಕರ್ತ ಮೊದಲ ಸಂಚಿಕೆಯನ್ನು ಬೀದರ್ ಸಮ್ಮೇಳನ ಉದ್ಘಾಟಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅರ್ಪಿಸಲಾಯಿತು.
ಪತ್ರಿಕೋದ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು, ಪತ್ರಕರ್ತರ ಸೇವೆ ಹಾಗೂ ತ್ಯಾಗವನ್ನು ದಾಖಲಿಸುವ ಇಂತಹ ನೆನಪಿನ ಸಂಚಿಕೆಗಳು ಮುಂದಿನ ಪೀಳಿಗೆಗೆ ಮಾರ್ಗದರ್ಶಿಯಾಗಲಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹರಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ರಾಜ್ಯ ಕಾರ್ಯದರ್ಶಿ ಸೋಮಶೇಖರ ಕೆರಗೋಡು ಹಾಗೂ ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ಆನಂದ ದೇವಪ್ಪ ಮತ್ತಿತರರು ಉಪಸ್ಥಿತರಿದ್ದರು.
Subscribe to get the latest posts sent to your email.