1
1

ಬೀದರ್ ಅಗಸ್ಟ್ 22 ಃ ನಾವೆಲ್ಲರೂ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಚಾರ-ವಿಚಾರ ಹಾಗೂ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀ ಸಿದ್ರಾಮ ಸಿಂಧೆ ಹೇಳಿದರು.
ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಬದುಕು, ಸಾಧನೆ ಹಾಗೂ ಬರಹಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೀದರ ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಬಗದಲ್ ಇವರ ಸಂಯುಕ್ತಾಶ್ರಯದಲ್ಲಿ 2026-27ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮ’ ವನ್ನು ಶನಿವಾರ (ಆ.22) ಬೆಳಿಗ್ಗೆ ಬಗದಲ್‌ನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಸಸಿಗೆ ನೀರೇರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಂಡು ಜ್ಞಾನವನ್ನು ಸಂಪಾದಿಸಬೇಕು. ಶಿಕ್ಷಣದ ಮೂಲಕ ತಮ್ಮ ಬದುಕನ್ನು ರೂಪಿಸಿಕೊಂಡು ಸಮಾಜಕ್ಕೆ ಕೊಡುಗೆ ನೀಡುವಂತಹ ದೊಡ್ಡ ವ್ಯಕ್ತಿಗಳಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ವಿನಯ ಮಾಳಗೆ ಅವರು ಉಪನ್ಯಾಸ ನೀಡುತ್ತಾ, ಪ್ರತಿಯೊಬ್ಬ ವ್ಯಕ್ತಿಯ ಜೀವನವೂ ಸಮಾಜದಲ್ಲಿ ಪರಿವರ್ತನೆ ತರುವ ಶಕ್ತಿಯಾಗಬೇಕು. ಶಿಕ್ಷಣ ಹಾಗೂ ಓದಿನ ಮೂಲಕವೇ ಸಮಾಜದಲ್ಲಿ ಮಹತ್ತರ ಬದಲಾವಣೆ ಸಾಧ್ಯ ಎಂಬುದನ್ನು ಡಾ. ಬಿ.ಆರ್. ಅಂಬೇಡ್ಕರ್ ಅವರು ತಮ್ಮ ಬದುಕಿನ ಮೂಲಕ ತೋರಿಸಿಕೊಟ್ಟಿದ್ದಾರೆ.
ಬಗದಲ್‌ನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ದಲ್ಲಿ ‘ಡಾ. ಬಿ.ಆರ್. ಅಂಬೇಡ್ಕರ್ ಅವರ ಬದುಕು, ಸಾಧನೆ ಮತ್ತು ಬರಹ’ ವಿಷಯದ ಕುರಿತು ಅವರು, ಅಂಬೇಡ್ಕರ್ ಅವರು ಶಿಕ್ಷಣ ಮತ್ತು ಓದಿಗೆ ಹೆಚ್ಚಿನ ಮಹತ್ವ ನೀಡಿದ್ದರು. ಜ್ಞಾನ ಸಂಪಾದನೆಯ ಮೂಲಕ ವ್ಯಕ್ತಿ ತನ್ನ ಬದುಕನ್ನು ಮಾತ್ರವಲ್ಲದೆ ಇಡೀ ಸಮಾಜದ ದಿಕ್ಕನ್ನೇ ಬದಲಾಯಿಸಬಹುದು ಎಂದರು.
ಅAಬೇಡ್ಕರ್ ಅವರು ಸ್ವತಃ ಶಾಲೆಗೆ ಆಗಮಿಸಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿದರೆ ಏನು ಹೇಳುತ್ತಿದ್ದರು ಎಂಬ ಕಲ್ಪನೆಯೊಂದಿಗೆ ಮಕ್ಕಳನ್ನೇ ಒಳಗೊಳ್ಳಿಸಿ, ಅವರ ಆಚಾರ-ವಿಚಾರಗಳು ಮತ್ತು ಸಂದೇಶಗಳನ್ನು ಮಕ್ಕಳ ಧ್ವನಿಯ ಮೂಲಕ ಪ್ರಸ್ತುತ ಪಡಿಸುವ ವಿನೂತನ ರೀತಿಯಲ್ಲಿ ಉಪನ್ಯಾಸ ನೀಡಿದರು. ಈ ಮೂಲಕ ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಅವರ ಜೀವನ ಹಾಗೂ ಚಿಂತನೆಗಳನ್ನು ಸರಳವಾಗಿ ಅರ್ಥೈಸುವ ಪ್ರಯತ್ನ ಮಾಡಿದರು.
ಚೆನ್ನಬಸವ ಹೇಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯುವ ಮುಖಂಡರಾದ ಮಹೇಶ ಗೋರನಾಳಕರ್, ಕಾಶೀನಾಥ್ ಗುಜ್ಜಗೆರೆ ಮಾತನಾಡಿದರು. ಸುನೀಲ್ ಭಾವಿಕಟ್ಟಿ, ಗೌತಮ ಬಗದಲಕರ್, ಗೌತಮ ಕುದರೆ, ಕು. ಕ್ಲೆöÊಮೆಂಟಿನಾ ಸೇರಿದಂತೆ ಇತರರು ವೇದಿಕೆಮೆಲ್ಲಿದ್ದರು.
ಪ್ರಬಂಧ ಸ್ಪರ್ಧೆಯಲ್ಲಿ ಸ್ನೇಹ ಶಿವಕುಮಾರ್ ಪ್ರಥಮ ಸ್ಥಾನ, ಸುಶ್ಮಿತಾ ಕುಪೇಂದ್ರ ಡೀಟೇಲ್ ಸ್ಥಾನ, ಸುದರ್ಶನ್ ಶಿವಕುಮಾರ್ ತೃತೀಯ ಸ್ಥಾನ ಪಡೆದಿದ್ದಾರೆ.
ಆಶು ಭಾಷಣೆ ಸ್ಪರ್ಧೆಯಲ್ಲಿ ನೈತಿಕ ಚಂದ್ರಕಾAತ ಪ್ರಥಮ ಸ್ಥಾನ, ಸುದರ್ಶನ್ ಶಿವಕುಮಾರ್ ದ್ವಿತೀಯ ಸ್ಥಾನ, ರಿತಿಕಾ ಆನಂದ್ ತೃತೀಯ ಸ್ಥಾನ ಪಡೆದು ಕಿರ್ತಿ ಹೆಚ್ಚಿಸಿದ್ದಾರೆ. ಪ್ರಬಂಧ ಸ್ಪರ್ಧೆಯ ನಿರ್ಣಾಯಕರಾಗಿ ಶ್ರೀಮತಿ ಸುವರ್ಣಾ ಹಾಗೂ ಶ್ರೀಮತಿ ವೈಭವಿ ಕಾರ್ಯನಿರ್ವಹಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಗಣ್ಯರಿಂದ ಬಹುಮಾನ ರೂಪದಲ್ಲಿ ಪುಸ್ತಕ ಪ್ರಮಾಣ ಪತ್ರ ವಿತರಿಸಿ ಗೌರವಿಸಿದರು. ಪ್ರಾರಂಭದಲ್ಲಿ ಪ್ರದೀಪ್ ನಿಡೋದೆ, ಸ್ವಾಗತಿಸಿದರು, ಗೌತಮ ಕುದರೆ ನಿರೂಪಿಸಿದರೆ, ಸುವರ್ಣ ವಂದಿಸಿದರು.
ಅದೇ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Subscribe to get the latest posts sent to your email.