1
1

ಬಸವಕಲ್ಯಾಣ: ಮೋಟರ್ ವಾಹನ ತರಬೇತಿದಾರರು ರಸ್ತೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆಗೆ ಹೊಸ ಚಾಲಕರಿಗೆ ಗುಣಮಟ್ಟದ ಹಾಗೂ ವೈಜ್ಞಾನಿಕ ವಾಹನ ಚಾಲನಾ ತರಬೇತಿ ನೀಡಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಮಹಮ್ಮದ್ ಜಾಫರ್ ಸಾದಿಕ್ ಹೇಳಿದರು.
ಬಸವಕಲ್ಯಾಣ ನಗರದ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ವಾಹನ ತರಬೇತಿ ಶಾಲೆಗಳ ಪ್ರತಿನಿಧಿಗಳ ಸಭೆ ನಡೆಯಿತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹೊಸದಾಗಿ ವಾಹನ ಚಾಲನೆ ಕಲಿಯುವವರಿಗೆ ಕೇವಲ ವಾಹನ ಚಾಲನೆ ಮಾತ್ರವಲ್ಲದೆ, ರಸ್ತೆ ಸುರಕ್ಷತೆ, ಸಂಚಾರ ನಿಯಮಗಳು ಹಾಗೂ ಜವಾಬ್ದಾರಿಯುತ ಚಾಲನೆಯ ಕುರಿತು ಸಮಗ್ರ ತರಬೇತಿ ನೀಡಬೇಕು ಎಂದು ಸೂಚಿಸಿದರು.
ಚಾಲನಾ ತರಬೇತಿ ಪಡೆಯುವವರಿಗೆ ಸಂಚಾರ ನಿಯಮಗಳ ಬಗ್ಗೆ ಸ್ಪಷ್ಟ ಅರಿವು ಮೂಡಿಸುವುದು ತರಬೇತಿದಾರರ ಪ್ರಮುಖ ಜವಾಬ್ದಾರಿಯಾಗಿದೆ. ತರಬೇತಿ ಸಂದರ್ಭದಲ್ಲಿ ಸುರಕ್ಷತಾ ಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ತರಬೇತಿ ಪಡೆದವರು ಮುಂದೆ ವಾಹನ ಚಲಾಯಿಸುವಾಗ ರಸ್ತೆ ನಿಯಮಗಳನ್ನು ಪಾಲಿಸುವಂತೆ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಹೇಳಿದರು.
ಹೊಸದಾಗಿ ವಾಹನ ಚಾಲನೆ ಕಲಿಯುವವರಿಗೆ ಅನುಭವಿ ತರಬೇತಿದಾರರಿಂದ ಪ್ರಾಯೋಗಿಕ ಹಾಗೂ ಪರಿಣಾಮಕಾರಿ ತರಬೇತಿ ದೊರೆಯುವಂತೆ ನೋಡಿಕೊಳ್ಳಬೇಕು. ವಾಹನ ಚಾಲಕರಲ್ಲಿ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವ ಮೂಲಕ ಅಪಘಾತಗಳ ಪ್ರಮಾಣ ಕಡಿಮೆ ಮಾಡಲು ಎಲ್ಲರೂ ಸಹಕರಿಸಬೇಕು ಎಂದು ತಿಳಿಸಿದರು.
ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಬೇಕು. ಕಾರು ಸೇರಿದಂತೆ ಯಾವುದೇ ವಾಹನ ಚಾಲನೆ ಮಾಡುವಾಗ ಚಾಲಕರು ಹಾಗೂ ಪ್ರಯಾಣಿಕರು ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ. ರಸ್ತೆ ಅಪಘಾತಗಳನ್ನು ತಡೆಗಟ್ಟಲು ಸಾರಿಗೆ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಜೊತೆಗೆ, ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆ ಹಾಗೂ ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸುವ ಕಾರ್ಯದಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು. ಸುರಕ್ಷಿತ ಚಾಲನೆ ಮತ್ತು ನಿಯಮ ಪಾಲನೆಯಿಂದ ಅಮೂಲ್ಯ ಜೀವಗಳನ್ನು ರಕ್ಷಿಸಬಹುದು.
ಹುಲಸೂರು ನಗರದ ಕಾಳೆ ಮೋಟಾರ್ ವಾಹನ ತರಬೇತಿ ಶಾಲೆಯ ಪ್ರಾಂಶುಪಾಲರಾದ ಪ್ರಶಾಂತ ಕಾಳೆ ಅವರು ಪ್ರಾದೇಶಿಕ ಸಾರಿಗೆ ಅಧಿಕಾರಿ ಮಹಮ್ಮದ್ ಜಾಫರ್ ಸಾದಿಕ್ ಅವರಿಗೆ ಈ ಸಂಧರ್ಭದಲ್ಲಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಮೋಟಾರ ವಾಹನ ನಿರಿಕ್ಷರಾದ ರಾಜಕುಮಾರ ಚೆಪ್ಟೆ.ವಿಜಯಕುಮಾರ ಉಮರ್ಗೆ.ಕಚೇರಿಯ ಅಧಿಕ್ಷಕರಾದ ಶ್ರೀಮತಿ ರಾಧಿಕಾ .ಹಾಗು ತರಬೇತಿ ಶಾಲೆಯ ಮುಖ್ಯೆಸ್ಥರಾದ ಎಸ್ ಕೆ ಪಾಟೀಲ. ರಾಜುಕುಮಾರ ಭೊಸಲೆ. ಅನೂಪ. ಧನರಾಜ ಪಾಟೀಲ.ಬಸವಕುಮಾರ.ಅಲ್ತಾಪ ಸಿಲಾರ.ಶ್ವೇತಾ.ಗೌರಿ ಭುರೆ.ರೇಖಾ ಧನ್ನುರೆ.ಜೋತಿ ಬೀರಾದರ. ಸಭೆಯಲ್ಲಿ ವಾಹನ ತರಬೇತಿ ಶಾಲೆಗಳ ಪ್ರತಿನಿಧಿಗಳು ಹಾಗೂ ಸಾರಿಗೆ ಇಲಾಖೆಯ ಸಿಬ್ಬಂದಿ ಉಪಸ್ಥಿತರಿದ್ದರು.
Subscribe to get the latest posts sent to your email.