1
1

ಬೀದರ್: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಾಗಿ ಇಂಜಿನಿಯರಿಂಗ್ ಹಾಗೂ ಮೆಡಿಕಲ್ ಕೋರ್ಸ್‌ಗಳಿಗೆ ಆದ್ಯತೆ ನೀಡುತ್ತಿರುವುದು ಗಮನಾರ್ಹ. ಆದರೆ ತಮ್ಮ ಉಜ್ವಲ ಭವಿಷ್ಯ ನಿರ್ಮಾಣಕ್ಕಾಗಿ ಪತ್ರಿಕೋದ್ಯಮ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ಪ್ರಗತಿ ಆರೋಗ್ಯ ಮತ್ತು ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಅರವಿಂದ ಕುಲಕರ್ಣಿ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ನಗರದ ಗುಂಪಾ ಸಮೀಪದ ಜನರಲ್ ಡಯಾಗ್ನೋಸ್ಟಿಕ್ ಅಂಡ್ ಕಲೆಕ್ಷನ್ ಲ್ಯಾಬ್ ನಲ್ಲಿ ಆಯೋಜಿಸಿದ್ದ ಪತ್ರಿಕೋದ್ಯಮ ಕುರಿತ ಚರ್ಚಾ ಕೂಟದಲ್ಲಿ ಅವರು ಮಾತನಾಡಿದರು. ಉತ್ತಮ ಸಮಾಜ ನಿರ್ಮಾಣಕ್ಕೆ ಜರ್ನಲಿಸಂ ಕೋರ್ಸ್ ಅತ್ಯಂತ ಮಹತ್ವದ್ದೆಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಪಶುವೈದ್ಯಕೀಯ ವಿಶ್ವವಿದ್ಯಾಲಯದ ನಿವೃತ್ತ ಉಪ ಹಣಕಾಸು ಅಧಿಕಾರಿ ವೀರಭದ್ರಪ್ಪ ಉಪ್ಪಿನ ಮಾತನಾಡಿ, ಮುದ್ರಣ ಮಾಧ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದ್ದು, ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದಾಗ ಜನಹಿತ ಕಾಪಾಡಲು ಸಾಧ್ಯ ಎಂದು ತಿಳಿಸಿದರು.
ಈ ಸಂದರ್ಭ ಬೀದರ್ ಎಕ್ಸಪ್ರೆಸ್ ಹಾಗೂ ಶ್ರೀಗಿರಿ ಪತ್ರಿಕೆಗಳ ಸಂಪಾದಕ ಹಾಗೂ ವರದಿಗಾರರಾದ ಸುನಿಲ್ ಕುಲಕರ್ಣಿ ಅವರ ಹುಟ್ಟುಹಬ್ಬದ ಅಂಗವಾಗಿ ಸನ್ಮಾನಿಸಲಾಯಿತು. ಮಾತನಾಡಿದ ಅವರು, ಪತ್ರಿಕೋದ್ಯಮ ಪದವಿ ವ್ಯಕ್ತಿಯ ವ್ಯಕ್ತಿತ್ವವನ್ನು ಸಕಾರಾತ್ಮಕವಾಗಿ ರೂಪಿಸುತ್ತದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಶ್ರೇಯಾ, ಶಾವ್ಯಾ, ಚಿಂಟು, ಬಬಲು ಸೇರಿದಂತೆ ಹಲವರು ಉಪಸ್ಥಿತರಿದ್ದರು.
Subscribe to get the latest posts sent to your email.