Popular Posts

ಸಡಗರ ಸಂಭ್ರಮದ ಸ್ವತಂತ್ರೋತ್ಸವ ಆಚರಣೆ ಆಗಲಿ ಬೈಕ್ ರ‍್ಯಾಲಿ ಚಾಲನೆ ನೀಡಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ. ಆಗಸ್ಟ್ 15 (ಕಕ ವಾರ್ತೆ) ಇಡಿ ದೇಶವೇ ಸ್ವತಂತ್ರ ದಿನವನ್ನು ಸಡಗರ ಸಂಭ್ರಮದಿAದ ಆಚರಿಸುತ್ತಿರುವ ಶುಭ ಸಂದರ್ಭದಲ್ಲಿ ಹಮ್ಮಿಕೊಂಡಿರುವುದು ಸಾರ್ವಜನಿಕರಲ್ಲಿ ಹರ್ಷ ಸಂಭ್ರಮ ನವ ಉಲ್ಲಾಸ ಸ್ವಾಭಿಮಾನ ಮೂಡಿಸಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಸರ್ಕಾರಿ ನೌಕರ ಸಂಘ, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿವಿಧ ಸಂಘಗಳ ಸಹಯೋಗದಲ್ಲಿ 80ನೇ ಸ್ವಾತಂತ್ರ‍್ಯೋತ್ಸವದ ಮುನ್ನ ದಿನ ಹರ ಘರ್ ತಿರಂಗಾ ಅಂಗವಾಗಿ ಬೀದರ್ ಕೋಟೆಯಲ್ಲಿ ಹಮ್ಮಿಕೊಂಡ ಬೈಕ್ ರ‍್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಬೀದರ್ ಸರ್ವ ಜನಾಂಗದ ಶಾಂತಿಯ ತೋಟ, ಇಲ್ಲಿ ಎಲ್ಲಾ ಧರ್ಮದವರು ಶಾಂತಿ ಸೌಹಾರ್ದದಿಂದ ಬಾಳುತ್ತಿದ್ದಾರೆ. ಸ್ವತಂತ್ರ ದಿನಾಚರಣೆಯನ್ನು ಉತ್ಸಹ ಸಂಭ್ರಮ ಉಲ್ಲಾಸದಿಂದ ಪ್ರತಿಯೊಬ್ಬರು ಸ್ವಾಭಿಮಾನದಿಂದ ಆಚರಿಸಬೇಕೆಂದರು.
ತಿರAಗಾ ಹೊತ್ತ ನೂರಾರು ಸಾರ್ವಜನಿಕರು ಬೈಕ್ ರ‍್ಯಾಲಿ ಪಾಲ್ಗೊಂಡು ದೇಶಭಕ್ತಿಯ ಘೋಷಣೆ ಕೂಗಿದರು. ರ್ಯಾಲಿಯು ಕೋಟೆಯ ಮುಖ್ಯ ದ್ವಾರದಿಂದ ಚೌಬಾರಾ, ಬಸವೇಶ್ವರ ವೃತ, ಅಂಬೇಡ್ಕರ್ ವೃತ್ತದ ಮೂಲಕ ಸಾಗಿ ಪರಿಶ ಗಾರ್ಡನ್ ನಲ್ಲಿ ಮುಕ್ತಾಯಗೊಂಡಿತು.
ಬೀದರ್ ಮಹಾನಗರ ಪಾಲಿಕೆ ಆಯುಕ್ತರದ ಮುಕುಲ್ ಜೈನ್, ಅಪರ ಜಿಲ್ಲಾಧಿಕಾರಿ ಸುರೇಖಾ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸೋಮಶೇಖರ ಬಿರದಾರ್, ಇ.ಓ. ಕೀರಣ ಪಾಟೀಲ್, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸುರೇಶ್ ಚೆನ್ನಶೆಟ್ಟಿ, ಕರ್ನಾಟಕ ಜನಪದ ಸಾಹಿತ್ಯ ಪರಿಷತ್ತಿನ ಸದಸ್ಯ ವಿಜಯ ಕುಮಾರ್ ಸೋನಾರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಮ ಶಿಂಧೆ ಸೇರಿದಂತೆ ವಿವಿಧ ಸಂಘ-ಸAಸ್ಥೆಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.


Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading

Subscribe