Popular Posts

ಸ್ವಯಂ ಉದ್ಯೋಗ ಸ್ಥಾಪಿಸಲು ಒಂದು ದಿನದ ಉದ್ಯಮಶೀಲತಾ ಜಾಗೃತಿ ಶಿಬಿರ

ಬೀದರ್, ಆಗಸ್ಟ್ 11 (ಕಕ ವಾರ್ತೆ): ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ವತಿಯಿಂದ ಸ್ವಯಂ ಉದ್ಯೋಗ ಸ್ಥಾಪಿಸಲು ಆಸಕ್ತಿಯುಳ್ಳ ಎಲ್ಲಾ ವರ್ಗದ ಪುರುಷರು ಹಾಗೂ ಮಹಿಳೆಯರಿಗಾಗಿ ‘ಹುಮ್ನಾಬಾದ್’ನಲ್ಲಿ ಒಂದು ದಿನದ ಉದ್ಯಮಶೀಲತಾ ಜಾಗೃತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೀದರ್ ಸಿಡಾಕ್ ಸಲಹೆಗಾರರು ತಿಳಿಸಿದ್ದಾರೆ.
ಈ ಶಿಬಿರದಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಯಂ ಉದ್ಯೋಗ ಯೋಜನೆಗಳು, ಬ್ಯಾಂಕ್ ವ್ಯವಹಾರಗಳು ಹಾಗೂ ಉದ್ಯಮ ಪ್ರಾರಂಭಿಸಲು ಸಾಲ ಸೌಲಭ್ಯ ಒದಗಿಸುವ ವಿವಿಧ ಸರ್ಕಾರಿ ಯೋಜನೆಗಳ ಕುರಿತು ಮಾಹಿತಿ ನೀಡಲಾಗುವುದು. ಅರ್ಹತೆಗಳು ಹಾಗೂ ನೋಂದಣಿ, ವಯೋಮಿತಿ: 18 ರಿಂದ 40 ವರ್ಷಗಳ ಒಳಗಿರಬೇಕು. ಶೈಕ್ಷಣಿಕ ಅರ್ಹತೆ: ಎಸ್.ಎಸ್.ಎಲ್.ಸಿ (SSLC) ಪಾಸ್ ಅಥವಾ ಫೇಲ್ ಆದ ಎಲ್ಲಾ ವರ್ಗದ ಪುರುಷರು ಮತ್ತು ಮಹಿಳೆಯರು ಭಾಗವಹಿಸಬಹುದು. ಆಸಕ್ತರು ಆಗಸ್ಟ್ 17ರ ಒಳಗೆ ಮೊಬೈಲ್ ಸಂಖ್ಯೆ: 7847846784 ಗೆ ಕರೆ ಮಾಡಿ ಅಥವಾ ಕಚೇರಿಗೆ ನೇರವಾಗಿ ಭೇಟಿ ನೀಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Discover more from ಕಲಿಯುಗದ ಕೂಗು

Subscribe to get the latest posts sent to your email.

Leave a Reply

Your email address will not be published. Required fields are marked *

error: Content is protected !!

Discover more from ಕಲಿಯುಗದ ಕೂಗು

Subscribe now to keep reading and get access to the full archive.

Continue reading

Subscribe